Breaking News

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಮನೆ: ಗಂಡ ಸಜೀವ ದಹನ, ಪತ್ನಿ ಸ್ಥಿತಿ ಗಂಭೀರ

Spread the love

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ.

ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕಾಶ್​ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್​ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ