Breaking News

ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ವಾಗ್ದಾಳಿ

Spread the love

ಮುಂಬೈ,ಜು.21-ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ತಮ್ಮವರನ್ನು ಕಳೆದುಕೊಂಡಿರುವವರು ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಕೊರೊನಾ ಎರಡನೆ ಅಲೆ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಯಾರು ಸಾವನ್ನಪ್ಪಿಲ ಎಂದು ಸಮರ್ಥಿಸಿಕೊಂಡ ಬೆನ್ನಲ್ಲೆ ರಾವತ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ಎರಡನೆ ಅಲೆ ಸಂದರ್ಭದಲ್ಲೂ ಆಕ್ಸಿಜನ್ ಕೊರತೆ ಇತ್ತು. ಆಗಲೂ ಹಲವು ರಾಜ್ಯಗಳಲ್ಲಿ ಆಮ್ಲಜನಕ ಸಿಗದೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ತಪ್ಪು ಮಾಹಿತಿ ನೀಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ಸಿಜನ್ ಸಿಗದೆ ತಮ್ಮವರನ್ನು ಕಳೆದುಕೊಂಡಿರುವವರು ನ್ಯಾಯಾಲಯದ ಮೊರೆ ಹೋಗಿ ಎಂದು ರಾವತ್ ಉಚಿತ ಸಲಹೆ ನೀಡಿದ್ದಾರೆ.

ಪೆಗಾಸಸ್ ಬೇಹುಗಾರಿಕೆ ವಿವಾದದ ದಾರಿ ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸುಳ್ಳು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವ ಕಾರ್ಯ ನಡೆಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ

Spread the loveಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ