Breaking News

ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ

Spread the love

ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ.
ಧನ್ವಂತರಿ ಯಾಗದಲ್ಲಿ ಭಾಗಿಯಾದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಎಲ್ಲರೂ ನನಗೆ 79 ವರ್ಷದವರೆಗೂ ಅವಕಾಶ ಕೊಟ್ಟಿದ್ದಾರೆ. ನಾಳೆಗೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷ ಆಗಲಿದೆ. ನನ್ನ ಉದ್ದೇಶ ಬರುವ ದಿನಗಳಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪವಾಗಿದೆ. ಅದೇ ಸಂಕಲ್ಪವನ್ನು ಈಗಲೂ ಮಾಡಿದ್ದೇನೆ ಎಂದರು.

ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಮುಂದಿನ ಸೂಚನೆಯನ್ನು ಕೊಡುತ್ತಾರೆ. ಅದರ ಆಧಾರದ ಮೇಲೆ ಜುಲೈ 26 ರಿಂದ ನನ್ನ ಕೆಲಸವನ್ನು ಪ್ರಾರಂಭ ಮಾಡಲಿದ್ದೇನೆ. 26 ರಂದು ಸರ್ಕಾರಕ್ಕೆ ಎರಡು ವರ್ಷವಾಗಿರುವ ಹಿನ್ನೆಲೆ ವಿಶೇಷ ಕಾರ್ಯಕ್ರಮವಿದೆ, ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ರಾಷ್ಟ್ರೀಯ ಅಧ್ಯಕ್ಷರು ಏನು ಸೂಚನೆ ಕೊಡುತ್ತಾರೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ