Breaking News

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

Spread the love

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ನಂದಗಡ ಡ್ಯಾಂಗೆ ಹರಿದು ಬರುತ್ತಿರುವ ನೀರು
ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಧಾರಾಕಾರವಾಗಿ ಮಳೆ ನೀರು ಹರಿದು ಬರುತ್ತಿದೆ. ‌ಪರಿಣಾಮವಾಗಿ ನಂದಗಡ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದ್ದು, ನಂದಗಡ ಗ್ರಾಮದ ಹೊರವಲಯದಲ್ಲಿ ಕೃಷಿ ಜಮೀನು ಜಲಾವೃತವಾಗಿದೆ. ಅಲ್ಲದೆ ಖಾನಾಪುರ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ