Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ

ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ

Spread the love

ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್‍ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂರು ಹೊಸ ಸೋಂಕಿತ ಪ್ರಕರಣ ಪತ್ತೆಯಾಗಿರುವುದು ವರದಿಯಾಗಿದೆ. ಈ ಮೂಲಕ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಕೊರೊನಾ ಹಾಟ್‌ಸ್ಪಾಟ್‌ ಆಗಿ ಪರಿಣಮಿಸಿದೆ. ಈಗ ಕುಡಚಿ ಪಟ್ಟಣ ಒಂದರಲ್ಲೇ 10 ಸೋಂಕಿತ ಪ್ರಕರಣಗಳು ಬೆಳಕಿಗೆ ,

ಸೊಂಕಿತ ರೋಗಿ 149ರ ಇಬ್ಬರೂ ಮೊಮ್ನಕ್ಕಳಿಗೆ ಕೊರೊನಾ ತಗುಲಿದೆ. ರೋಗಿ 243 ಹಾಗೂ ರೋಗಿ 244 ಇಬ್ಬರೂ ರೋಗಿ 149ರ ಮೊಮ್ಮಕ್ಕಳಾಗಿದ್ದು, ರೋಗಿ 245 ಸೇರಿ ಎಲ್ಲರೂ ದೆಹಲಿ ಜಮಾತಗೆ ಹೋಗಿ ಬಂದವರು ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ 7 ಮಂದಿ ಸೋಂಕಿತರಿಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ವರದಿಯಾದ ಪ್ರಕರಣಗಳ ಸೋಂಕಿತರನ್ನು ಕೂಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕುಡಚಿ ಪಟ್ಟಣದ ಜನತೆ ನಿಜಾಮುದ್ದೀನ್ ನಂಜಿಗೆ ಅಕ್ಷರಶಃ ಬೆಚ್ಚಿ ಬಿದ್ದಿದ್ದು, ಸೋಂಕಿತರ ಸಂಪರ್ಕ ಮಾಡಿದ್ದ 46 ಜನರನ್ನು ಜಿಲ್ಲಾಡಳಿತ ಕ್ವಾರಂಟೈನ ಮಾಡಿದೆ. ದಿನದಿಂದ ದಿನಕ್ಕೆ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕುಡಚಿ ಪಟ್ಟಣವನ್ನು ಸಂಪೂರ್ಣ ಲಾಕಡೌನ್ ಮಾಡಲಾಗಿದ್ದು, ಲಾಕ್‍ಡೌನ ಉಲಂಘಿಸಿ ಹೊರಬರುವವರ ಮೇಲೆ ಡ್ರೋಣ್ ಕ್ಯಾಮೆರಾ ಮೂಲಕ ಕಣ್ಣಿಟ್ಟಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ