Breaking News

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಫ್ರಾರಂಭ

Spread the love

ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

 

ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಶ್ಮೀರಾ ಪರದೇಶಿ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಆಕ್ಷನ್‌ ಎಂಟರ್ ಟೇನರ್ ಒಳಗೊಂಡ ಈ ಚಿತ್ರವನ್ನು ಚಂದ್ರು ಮನೋಹರನ್ ನಿರ್ಮಾಣ ಮಾಡಿದ್ದಾರೆ. ದತ್ತಣ್ಣ, ಅಚ್ಯುತ್ ಕುಮಾರ್, ಶಿವರಾಜ್ ಕೆ ಆರ್ ಪೇಟೆ, ಚಿಕ್ಕಣ್ಣ, ರಾಜೇಶ್ ನಟರಂಗ, ನಿಹಾರಿಕ, ಶೋಭರಾಜ್, ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ