ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ” ಎಂದರು.
ರಾಜಕೀಯ ಅಸ್ಥಿರತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, “ಹಾಗೆ ನಿಮಗೆ ಅನಿಸುತ್ತಿದೆ. ಆದರೆ ನಮಗೆ ಅನಿಸುತ್ತಿಲ್ಲ” ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಈ ಅಚ್ಚರಿಯ ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.
Laxmi News 24×7