Breaking News

4 ಬಾರಿ ಸಿಎಂ ಆದ್ರೂ ಅವಧಿ ಪೂರೈಸಿಲ್ಲ; BSY ಹೋದರೂ ಮತ್ತೋರ್ವ ಭ್ರಷ್ಟ ಸಿಎಂ ಬರ್ತಾರೆ; ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Spread the love

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪಗೆ ಸರಿಸಾಟಿಯಾದ ನಾಯಕ ಬೇರೆ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಓರ್ವ ಭ್ರಷ್ಟ ಸಿಎಂ ಆಗಿದ್ದರು. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂದು 6 ತಿಂಗಳ ಹಿಂದೆಯೇ ನಾನು ಹೇಳಿದ್ದೆ. ಇದು ಗೊತ್ತಿರುವ ವಿಚಾರ. ಒಬ್ಬ ಭ್ರಷ್ಟ ಮುಖ್ಯಮಂತ್ರಿ ತೆಗೆದು ಮತ್ತೋರ್ವ ಭ್ರಷ್ಟನನ್ನು ಬಿಜೆಪಿ ನಾಯಕರು ಮುಖ್ಯಮಂತ್ರಿ ಮಾಡ್ತಾರೆ ಇದರಿಂದ ರಾಜ್ಯಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

 

17 ಶಾಸಕರು ಹೋಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದರು. ನನ್ನ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಹೇಳಿದ್ದರು. ಆದರೆ ಬಿಎಸ್ ವೈ ಸರ್ಕಾರ 30 ಪರ್ಸೆಂಟ್ ಸರ್ಕಾರವಾಗಿತ್ತು. ರಾಜ್ಯ 10 ವರ್ಷ ಆರ್ಥಿಕವಾಗಿ ಹಿಂದಕ್ಕೆ ಹೋಗಿದೆ. ಸ್ವತಂತ್ರ ಭಾರತದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಇದು. ಇಡಿ ಬಿಜೆಪಿಯೇ ಅತ್ಯಂತ ಭ್ರಷ್ಟ ಪಕ್ಷ. ಹಾಗಾಗಿ ಬಿಜೆಪಿ ತೊಲಗುವವರೆಗೂ ರಾಜ್ಯಕ್ಕೆ ಮುಕ್ತಿಯಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ