Breaking News

ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…?

Spread the love

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ.

ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರ ಹೆಸರು ಚರ್ಚೆಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾಳಿನ ಸಭೆಯಲ್ಲಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

Spread the loveಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ  ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ