Breaking News

ನೂತನ ಮುಖ್ಯಮಂತ್ರಿಯಾಗಿ ಪ್ರಹ್ಲಾದ್ ಜೋಷಿ, ಡಿಸಿಎಂ ಆಗಿ ಬಿವೈ ವಿಜಯೇಂದ್ರ ನೇಮಕ.?

Spread the love

ಬೆಂಗಳೂರು : ಅಂತೂ ಇಂತೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ( BS Yediyurappa Resignation ) ರಾಜಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬಳಿಕ ಇದೀಗ ಮುಂದಿನ ಮುಖ್ಯಮಂತ್ರಿ ಯಾರು ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಆದ್ರೇ ಬಿಜೆಪಿಯ ಮೂಲಗಳಿಂದ ತಿಳಿದು ಬಂದಂತೆ , ಮುಂದಿನ ಮುಖ್ಯಮಂತ್ರಿಯಾಗಿ ಪ್ರಹ್ಲಾದ್ ಜೋಶಿ ( Pralhad Joshi ) ಉಪಮುಖ್ಯಮಂತ್ರಿಯಾಗಿ ಬಿ.ವೈ.ವಿಜಯೇಂದ್ರ ( BY Vijayendra ) ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.

 

ಉಪಮುಖ್ಯಮಂತ್ರಿ ಹುದ್ದೆಗೆ ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಕೂಡ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿ ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿಯಾಗಿ ಬಿ.ವೈ. ವಿಜಯೇಂದ್ರ ಅವರು ಬಹುತೇಕ ಖಚಿತವಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

 

ತಮ್ಮ ಪುತ್ರನಿಗೆ ಡಿಸಿಎಂ ಹುದ್ದೆ ಕೊಡಿಸುವ ಸಲುವಾಗಿಯೇ ಯಡಿಯೂರಪ್ಪ ಕೊನೆ ಕ್ಷಣದವರೆಗೆ ತಮ್ಮ ರಾಜೀನಾಮೆ ವಿಚಾರವನ್ನು ಬಹಳ ನಿಗೂಢವಾಗಿ ಇಟ್ಟಿದ್ದರೆಂದು‌ ಹೇಳಲಾಗುತ್ತಿದೆ. ಇದರ ಜೊತೆಗೆ ಶೇ.50 ರಷ್ಟು ಸಚಿವರನ್ನು ಸಂಪುಟದಿಂದ ತೆಗೆದು, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡೋ ಕೆಲಸ ಕೂಡ ಆಗಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ