ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಶಿವಕುಮಾರ್, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು..? ಆ ನೋವು ಕೊಟ್ಟವರು ಯಾರು..? ಎಂಬುದನ್ನು ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕು.
![](https://laxminews24x7.com/wp-content/uploads/2021/07/jpg-660x330.jpg)
ಕಣ್ಣೀರ ಹಿಂದಿನ ನೋವೇನು..?, ಆ ನೋವು ಕೊಟ್ಟವರಾರೆಂಬುದನ್ನು ಬಿಎಸ್‍ವೈ ಬಹಿರಂಗಪಡಿಸಲಿ: ಡಿಕೆಶಿ
ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರಾಗಿತ್ತು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.