ಬೆಂಗಳೂರು: ರಾಜೀನಾಮೆ ನೀಡುವಂತೆ ದೆಹಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ ನಾನೇ ಸ್ವಯಂ ನಿರ್ಧಾರ ಮಾಡಿ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲು ಹುದ್ದೆ ಸೇರಿ ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜಭವನದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟು ಬೇರೆಯವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಗಬೇಕು ಎಂದು ನಾನು ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ. ಪ್ರಧಾನಿಯಾಗಲಿ ಆಗಲಿ, ವರಿಷ್ಠರಾಗಲಿ ನನ್ನ ಮೇಲೆ ಯಾವುದೇ ಒತ್ತಡ ಹೇರಿಲ್ಲ ಇದು ನನ್ನ ಸ್ವಂತ ನಿರ್ಧಾರ ಎಂದರ
ಮುಂದೆ ಮುಖ್ಯಮಂತ್ರಿ ಯಾರಾಗಬೇಕು? ಎಂದು ನಾನು ಯಾವುದೇ ಹೆಸರನ್ನು ಪ್ರಸ್ತಾಪ ಮಾಡುವುದಿಲ್ಲ, ಅದು ಹೈಕಮಾಂಡಿಗೆ ಬಿಟ್ಟಿದ್ದು. ಅವರು ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೋ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನ. ಒಟ್ಟಾಗಿ ಸೇರಿ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ಕೆಲಸ ಮಾಡುತ್ತೇವೆ ಎಂದರು.