ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಮೊಸಳೆ ಮರಿಯೊಂದು ಮನೆಗೆ ಬಂದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತುಂಗಭದ್ರಾ ನದಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರಿನ ಪ್ರಮಾಣ ಹೆಚ್ಚಿದಂತೆ ದಡಕ್ಕ ಬಂದ ಮೊಸಳೆ ಮರಿಯೊಂದು ನದಿ ದಡದಲ್ಲಿದ್ದ ರೈತನ ಮನೆಗೆ ಬಂದು ಪರದಾಡಿದೆ.
ತಕ್ಷಣ ಮೊಸಳೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿದ್ದು, ಮಾವಿನ ಕೋಟೆ ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದೇಶ್ ಅವರಿಗೆ ಒಪ್ಪಿಸಿದ್ದಾರೆ
Laxmi News 24×7