Breaking News

ಯಡಿಯೂರಪ್ಪಗೆ ವಯಸ್ಸು 75 ವರ್ಷ, ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ – ಕಾಂಗ್ರೆಸ್ ಎಂಎಲ್ಸಿ ಸಿ.ಎಂ. ಇಬ್ರಾಹಿಂ

Spread the love

ಬೆಂಗಳೂರು: ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯಾ, ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ವಯಸ್ಸು. ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆರೂವರೆ ಕೋಟಿ ಜನರಿರುವ ರಾಜ್ಯದಲ್ಲಿ ಬದಲಾವಣೆ ಸಹಿಸಲ್ಲ. ಏಕಾಏಕಿ ರಾಜಕೀಯ ಒತ್ತಡ ಹಾಕಿ ಪಡೆಯೋದು ಸರಿಯಲ್ಲ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಅಕ್ಟೋಬರ್​ನಲ್ಲಿ ಅಲ್ಪಸಂಖ್ಯಾತರ ಸೇರಿ ಸಭೆ ನಡೆಯಲಿದೆ. ಹೀರಾ-ಪೀರಾ ಸಭೆ ಕರೆದು ರಾಜ್ಯದ ಹಿತಾಸಕ್ತಿ ಕಾಪಾಡಲು ಏನು ಕ್ರಮ ಕೈಗೊಳ್ಳಬೇಕು ಅನ್ನೋದನ್ನು ನಿರ್ಧರಿಸುತ್ತೇವೆ. ಈ ತಿಂಗಳಲ್ಲಿ ಅಲ್ಪಸಂಖ್ಯಾತರ ಸಭೆ ಕರೆದಿದ್ದೇನೆ. ಯಡಿಯೂರಪ್ಪ ಲವಲವಿಕೆಯಿಂದ ಇದ್ದಾರೆ. ರಾಜ್ಯಪಾಲರ ಹುದ್ದೆ ತಿರಸ್ಕರಿಸಿದ್ದಾರೆ. ಕನ್ನಡಿಗರು ನೀಡುವವರು, ಬೇಡುವವರಲ್ಲ. ಯಡಿಯೂರಪ್ಪ ಮೇಲೆ ಆರೋಪ, ಪ್ರತ್ಯಾರೋಪ ಇರಬಹುದು, ಅದು ಬೇರೆ. ಅಧಿಕಾರ ಇದ್ದಾಗ ನಾನು ದೂರ ಇರುವ ಮನುಷ್ಯ ಎಂದು ಇಬ್ರಾಹಿಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ