ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ ಎಂದು ಅರುಣ್ ಸಿಂಗ್ ತಿಳಿಸಿದರು.
Laxmi News 24×7