Breaking News

ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

Spread the love

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಮೊದಲೇ ಸುಳಿವು ನೀಡಿ, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಹುದ್ದೆ ಒಲಿದು ಬಂದಿದ್ದು, ಈ ಮೂಲಕ ಯಡಿಯೂರಪ್ಪ ನಾಯಕತ್ವವೂ ಬದಲಾವಣೆ ಆಗಿದೆ. ಹೀಗೆ ನಾಯಕತ್ವ ಬದಲಾವಣೆ ಹಾಗೂ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಸಿಎಂ ಹುದ್ದೆ ಬಗ್ಗೆ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ