ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆನೀಡಿದ ನಂತ್ರ, ಕರ್ನಾಟಕ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ
