Breaking News

ದುರಾಡಳಿತದಿಂದ ದಿಕ್ಕು ತಪ್ಪಿದ ರಾಜ್ಯಕ್ಕೆ ಸ್ನೇಹಿತ ಬೊಮ್ಮಾಯಿ ಸಿಎಂ ಆಗಿದ್ದಾರೆ, ಅವರಿಗೆ ಅಗತ್ಯ ಸಹಕಾರ ನೀಡುತ್ತೇನೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್​ ಬೊಮ್ಮಾಯಿ (Basavaraj S Bommai) ಆಯ್ಕೆಯಾಗಿದ್ದಾರೆ. ಜನತಾದಳದಿಂದ ಬಂದು ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಅವರಿಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಶುಭಕೋರಿದ್ದು, ನನ್ನ ಸ್ನೇಹಿತ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Karnataka), ಅವರಿಗೆ ಶುಭವಾಗಲಿ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ ಆಡಳಿತ ಭ್ರಷ್ಟಾಚಾರದಿಂದ ಹೊಲಸೆದ್ದಿರುವ, ದುರಾಡಾಳಿತದಿಂದ ದಿಕ್ಕುತಪ್ಪಿರುವ ಮತ್ತು ಆಂತರಿಕ ಕಚ್ಚಾಟದಿಂದ ನಲುಗಿಹೋಗಿರುವ ಸಂದರ್ಭದಲ್ಲಿ ಸ್ನೇಹಿತ ಬಸವರಾಜ ಸೋಮಪ್ಪ ಬೊಮ್ಮಾಯಿ ಹೊಸಮುಖ್ಯಮಂತ್ರಿಯಾಗಲಿದ್ದಾರೆ. ಅವರಿಗೆ ಯಶಸ್ಸನ್ನು ಕೋರುತ್ತೇನೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಶುಭ ಕೋರಿದ ಹೆಚ್​.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​.ಡಿ ಕುಮಾರಸ್ವಾಮಿ ಕೂಡಾ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ ಎಂದು ಟ್ವೀಟ್ ಮಾಡಿದ್ದಾರೆ.

 

ಅಭಿನಂದನೆ ಸಲ್ಲಿಸಿದ ಹೆಚ್​.ಡಿ.ದೇವೇಗೌಡ
ಅಂತೆಯೇ, ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ.ದೇವೇಗೌಡ, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆದ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಅಭಿನಂದನೆಗಳು. ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವಿರೆಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

ಬಿ.ಎಸ್.ಯಡಿಯೂರಪ್ಪ ಅವರಿಂದ ಅಭಿನಂದನೆ
ಏತನ್ಮಧ್ಯೆ, ತನ್ನ ಆಪ್ತ ಹಾಗೂ ಉತ್ತರಾಧಿಕಾರಿಗೆ ಶುಭ ಕೋರಿರುವ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ