Breaking News

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

Spread the love

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು.

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ ರಮೇಶ್ ಕಶ್ಯಪ್ ಈ ಘಟನೆ ಸಂಬಂಧ ಹನುಮಂತನಗರ ಠಾಣೆಗೆ ಹೋಗಿ ದೂರು ನೀಡಿದ್ದರು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಖದೀಮರಿಂದ 3 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕದ್ದಿರುವ ಚಿನ್ನ ಅಡವಿಟ್ಟು ಹಣ ಪಡೆದಿದ್ದ ಎಂದು ತಿಳಿದು ಬಂದಿದೆ.

ಇನ್ನು ಆರೋಪಿ ಮನೆಯ ಅಸಲಿ ಕೀಯನ್ನು ತೆಗೆದುಕೊಂಡು ಹೋಗಿ ನಕಲಿ ಕೀ ಮಾಡಿಸಿಕೊಂಡು ಬಂದಿದ್ದ. ಸುಳಿವು ಸಿಗಬಾರದೆಂದು ತನ್ನ ಸ್ನೇಹಿತ ಅಭಿಷೇಕ್ ಮೂಲಕ ಮನೆಗೆ ಕನ್ನ ಹಾಕಿಸಿದ್ದ. ಕದ್ದ ಚಿನ್ನ ಅಡವಿಟ್ಟು ಹಣ ಪಡೆದಿದ್ದ. ಸಿಸಿಟಿವಿ ಹಾಗೂ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಚಂದ್ರಶೇಖರ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ.


Spread the love

About Laxminews 24x7

Check Also

ಅನ್ಯ ರಾಜ್ಯಗಳ ಪೊಲೀಸ್ ಸಿಬ್ಬಂದಿಯ ಕ್ಯಾಪ್‌ ಪರಿಶೀಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​

Spread the loveಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ