ಶಿವಮೊಗ್: ರಾಜ್ಯದಲ್ಲಿ ಬಸವರಾಜ್ ಬೊಮ್ಮಯಿ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಳಿಕ ಬಿಜೆಪಿ ಹಿರಿಯ ನಾಯಕರ ನಡೆಗಳು ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದೆ.
ಬಿಎಸ್ವೈ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತನ್ನ ಭವಿಷ್ಯದ ರಾಜಕೀಯ ನಿರ್ಧಾರವನ್ನು ಈಶ್ವರಪ್ಪ ಘೋಷಣೆ ಮಾಡುತ್ತಾರೆ. ಜಗದೀಶ್ ಶೆಟ್ಟರ್ ರೀತಿಯಲ್ಲೆ ನಿರ್ಧಾರ ಮಾಡುತ್ತಾರೆ ಎಂಬ ಮಾತುಗಳು ಕೇಳಿಬಂದಿದೆ.
ಬೊಮ್ಮಾಯಿ ಸಂಪುಟದಲ್ಲಿ ತಾನು ಸಚಿವ ಸ್ಥಾನ ಪಡೆಯುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ಈಶ್ವರಪ್ಪ ಕೂಡಾ ಅವರ ಹಾಗೆ ಜಿಲ್ಲೆಯ ಕಿರಿಯ ಶಾಸಕರಿಗೆ ಅವಕಾಶ ಮಾಡಿ ಕೊಡುತ್ತಾರೆಯೇ ಎಂಬ ಪ್ರಶ್ನೆಗಳು ಈಗ ಎದ್ದಿವೆ.
ಅಥವಾ ಮತ್ತೊಮ್ಮೆ ಸಚಿವ ಸ್ಥಾನ ಇಲ್ಲವೇ ಡಿಸಿಎಂ ಗೆ ಪಟ್ಟು ಹಿಡಿತ್ತಾರೆಯೇ ಎಂಬ ಕುತೂಹಲವನ್ನೂ ಮೂಡಿಸಿದೆ ಮಾಜಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ.