Breaking News

ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ.: ಉಮೇಶ್ ಕತ್ತಿ,

Spread the love

ಬೆಂಗಳೂರು : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೊಸ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ. ಈ ಹಿಂದೆ 4 ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಸಚಿವ ಆಗುತ್ತೇನೆ ಎಂಬ ನಂಬಿಕೆ ಇದೆ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

 

ಇನ್ನು ಜಗದೀಶ್ ಶೆಟ್ಟರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ, ಜಗದೀಶ್ ಶೆಟ್ಟರ್ ಹೇಳಿಕೆ ಅವರ ವೈಯಕ್ತಿಕ. ನಾನೂ ಪಕ್ಷದಲ್ಲಿದ್ದೇನೆ. ಹೈಕಮಾಂಡ್ ಭೇಟಿಯಾಗುವೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ. ನಾನು ಸಚಿವನಾಗದಿದ್ದರೂ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ