ಗೋಕಾಕ್ : ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗ ವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.

ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ. ಸಾರ್ವಜನಿಕರು ಸಹ ವೈದ್ಯರು, ಪೊಲೀಸರಿಗೆ ಸಹಕರಿಸಬೇಕು. ಲಾಕ್ ಡೌನ್ ನಿಯಮಗಳನ್ನು ಪಾಲಿಸಿ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಎಲ್ಲ ಅಧಿಕಾರಿಗಳು ಸಾಲಾಗಿ ನಿಂತು ದ್ರಾವಣ ಸಿಂಪಡಿಸಿಕೊಂಡರು.

Laxmi News 24×7