Breaking News

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

Spread the love

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಗಿರೀಶ್ ಎಂಬಾತ ಮಂಡ್ಯ ಸಮೀಪದ ಕೊತ್ತತ್ತಿ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ವೇಳೆ ರವಿಚಂದ್ರ, ಕಾರ್ತಿಕ್, ಕಿರಣ್, ಮಂಜು ದಾಳಿ ಮಾಡಿ ಹಲ್ಲೆ ನಡೆಸಿದ್ದು, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ಕಿರಣ್ ಬಳಿ ಗಿರೀಶ ಮಹಿಳೆ ಬೇಕೆಂದು ಹೇಳಿಕೊಂಡಿದ್ದ. ಕಿರಣ್ ಮಳವಳ್ಳಿ ಮೂಲದ ಮಹಿಳೆಯ ನಂಬರ್ ಕೊಟ್ಟಿದ್ದ. ಗಿರೀಶ್ ಆಕೆಯನ್ನು ಕರೆಸಿಕೊಂಡು ಕೊತ್ತತ್ತಿ ಹೊರವಲಯದ ದೇವಾಲಯದ ಬಳಿ ಏಕಾಂತದಲ್ಲಿದ್ದ ವೇಳೆಯಲ್ಲಿ ಈ ನಾಲ್ವರು ದಾಳಿ ಮಾಡಿ ಹಲ್ಲೆ ನಡೆಸಿ ಹಣ ಕಸಿದು ಪರಾರಿಯಾಗಿದ್ದಾರೆ. ಮಹಿಳೆ ಕೂಡ ಅವರೊಂದಿಗೆ ಹೋಗಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದು ಹನಿಟ್ರ್ಯಾಪ್ ಎಂಬ ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ