Breaking News

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

Spread the love

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ.

ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಅದಲ್ಲದೆ ಇಂದು ಮಧ್ಯಾಹ್ನ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ಸಮಸ್ಯೆಗಳ ಕುರಿತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಿಎಂ ದೆಹಲಿ ಭೇಟಿ ಸಹಜವಾಗಿಯೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟುರುವವರಿಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಸಚಿವ ಸಂಪುಟ ಪಟ್ಟಿಗೆ ಇಂದೇ ವರಿಷ್ಠರ ಒಪ್ಪಿಗೆ ಸಿಗುತ್ತದೆಯೇ ಎಂದು ಕಾದು ನೋಡಬೇಕಿದೆ.

ಆದರೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಂಪುಟ ರಚನೆ ವಿಚಾರ ಮೊದಲ ಭೇಟಿಯಲ್ಲೇ ಚರ್ಚೆ ಮಾಡುವುದಿಲ್ಲ. ಮುಂದಿನ ಭೇಟಿಯಲ್ಲಿ ಚರ್ಚೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

 

Spread the love

About Laxminews 24x7

Check Also

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

Spread the love ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ