Breaking News

ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

Spread the love

ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ.

ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದೂ ಉಲ್ಲೇಖಿಸಿದ್ದಾರೆ.

ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ.

ಈ ಸಂಬಂಧ 13 ಮಾರ್ಗದರ್ಶಿ ಸೂತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಇಲ್ಲಿದೆ ಸಮಗ್ರ ವಿವರ –

 

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ