Breaking News

ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ

Spread the love

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕರ ಸ್ವೀಕರಿಸಿರುವ ಬೆನ್ನಲ್ಲೇ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ.

ಈ ನಡುವೆ ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ.

ನಿನ್ನೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ವಿಚಾರವಾಗಿ ಜೆ.ಪಿ.ನಡ್ಡಾ ಬಳಿ ಚರ್ಚಿಸುತ್ತೇನೆ. ನಡ್ಡಾ ಅವರು ಯಾವುದೋ ಸಭೆ ನಡೆಸುತ್ತಿದ್ದು, ಸಭೆ ಬಳಿಕ ಅವರೊಂದಿಗೆ ಮಾತನಾಡಿ ನಿರ್ಧರಿಸುವುದಾಗಿ ತಿಳಿಸಿದರು.

ಅಂದರೆ, ಇಂದೇ ಸಚಿವಸಂಪುಟ ಕುರಿತು ಸಹ ಚರ್ಚೆ ನಡೆಯುವುದು ಪಕ್ಕಾ ಆಗಿದೆ. ಈ ಮೊದಲು ಸಿಎಂ, ಈ ಭೇಟಿಯಲ್ಲಿ ಸಚಿವಸಂಪುಟ ಕುರಿತು ಚರ್ಚಿಸುವುದುಲ್ಲ ಎಂದಿದ್ದರು.

ಇನ್ನು ಸೋಮವಾರ ಸಿಎಂ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದ್ದು, ಒಂದೇ ಹಂತದಲ್ಲಿ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹೀಗಾಗಿ ಬುಧವಾರ ಅಥವಾ ಗುರುವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ