Breaking News

ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ

Spread the love

ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಮೇಕೆದಾಟುವಿನಲ್ಲಿ ನಮ್ಮ ಹಕ್ಕಿದೆ. ಆ ನೀರಿನಲ್ಲಿ ನಮಗೂ ಪಾಲಿದೆ, ಹಕ್ಕಿದೆ. ಆ ಯೋಜನೆ ಮಾಡಲು ಈಗಾಗಲೇ ನಾವು ಡಿಪಿಆರ್ ಮಾಡಿದ್ದೇವೆ. ಈ ಡಿಪಿಆರ್ ಅಪ್ರೂವ್ ಮಾಡಿಕೊಂಡು ನಾವು ಯೋಜನೆಯನ್ನು ಪೂರ್ಣ ಮಾಡಿಯೇ ಮಾಡುತ್ತೇವೆ. ಈ ಬಗ್ಗೆ ಯಾವುದೇ ಪ್ರಶ್ನೆ ಇಲ್ಲ. ಯಾರಾದರೂ ಉಪವಾಸ ಕುಳೀತುಕೊಳ್ಳಲಿ, ಯಾರಾದರೂ ಊಟ ಮಾಡಿಕೊಳ್ಳಲಿ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.

ಉಪವಾಸ ಸತ್ಯಾಗ್ರಹ:
ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ವಿರೋಧಿಸಿ ಕರ್ನಾಟಕದ ವಿರುದ್ಧ ಆಗಸ್ಟ್ 5ರಷ್ಟು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಇರಬಹುದು. ಆದರೆ ನಾವು ತಮಿಳುನಾಡು ಸರ್ಕಾರದ ಪರ ನಿಲ್ಲುತ್ತೇನೆ ಎಂದು ಹೇಳಿದ್ದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ