Breaking News
Home / ರಾಜಕೀಯ / ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Spread the love

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್)ಯೋಜನೆ(ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಹಾಗೂ ಆದಿವಾಸಿ ಜನಾಂಗದವರಿಗಾಗಿ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ(ಮೈಕ್ರೋ ಕ್ರೆಡಿಟ್) ಯೋಜನೆ (ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ)ಗೆ ಅರ್ಜಿ ಸಲ್ಲಿಸಬಹುದು.

ಆ.25 ರೊಳಗಾಗಿ ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ದಾಖಲೆಗಳನ್ನು ನಿಗಮದ ವೆಬ್‌ಸೈಟ್: http://kmvstdcl.karnataka.gov.in ರ ಮೂಲಕ ಅಪ್‌ಲೋಡ್ ಮಾಡಬಹುದು ಹಾಗೂ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ಷರತ್ತುಗಳು ನಿಗಮದ ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ(ನಿ), ನಂ7, ವಾರ್ಡ್ ನಂ.30, ಕೆ.ಹೆಚ್.ಕಾಲೋನಿ, ತಿಲಕ್ ನಗರ, ಕಂಟೋನ್ಮೆಂಟ್, ಬಳ್ಳಾರಿ ದೂ.ಸಂ:08392-245551 ಗೆ ಸಂಪರ್ಕಿಸಬಹುದು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ