Breaking News

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

Spread the love

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

 

ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, ಶುಭ ಹಾರೈಸಿದರು.

 

 

 

ತಂದೆಯವರಾದ ಸತೀಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಕ್ರೀಡೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದ್ದಾರೆ. ಅದೇ ರೀತಿ ನಾವು ಸಹ ಅವರ ಮಾರ್ಗದರ್ಶನದಲ್ಲಿ ಕ್ರೀಡೆಯಲ್ಲಿ ಆಸಕ್ತಿ ಇರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತಿದ್ದೇವೆ ಅಂತಾ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

 

ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಪ್ರಿಯಾಂಕಾ ಕಂಗ್ರಾಳ್ಕರ್ ಅವರು ಮಿನಿಪುಟ್ ಬಾಲ್ ಸ್ಪರ್ಧೆಗೆ ಆಯ್ಕೆ ಆಗಿರುವುದು ಸಂತೋಷದ ವಿಷಯ. ಮುಂದಿನ ಕ್ರೀಡಾ ಜೀವನಕ್ಕೆ ಶುಭವಾಗಲಿ. ನಿಮಗೆ ಕ್ರೀಡಾ ಸಾಧನೆಗೆ ಯಾವುದೇ ರೀತಿ ಸಹಾಯ ಬೇಕಾದರು ಕೇಳಬಹುದು ಎಂದು ತಿಳಿಸಿದರು. ಸತೀಶ್ ಜಾರಕಿಹೊಳಿ ಅವರು ಕೂಡಾ ಯುವತಿಗೆ ಶುಭ ಕೋರಿದರು.

 

ಈ ಸಂದರ್ಭದಲ್ಲಿ ಜಿಪಂ. ಮಾಜಿ ಉಪಾಧ್ಯಕ್ಷ ಅರುಣ್ ಕಟಂಬಲೆ, ಮಾಜಿ ಸದಸ್ಯ ಸಿದ್ದಗೌಡ ಸುಣಗಾರ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಸುನೀಲ ಭಜಂತ್ರಿ, ಮಾರುತಿ ಗುಟಗುದ್ದಿ ಇತರರು ಇದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ