Breaking News

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

Spread the love

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಕುಖ್ಯಾತ ರೌಡಿ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ