ಬೆಳಗಾವಿ: ಯಾವುದೇ ಸ್ಥಾನ ನೀಡಿದರೂ ನಾನು ನಿಭಾಯಿಸುವೆ. ಮಂತ್ರಿಗಿರಿಗಾಗಿ ಯಾವುದೇ ಲಾಭಿ ಮಾಡಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಅಥಣಿ ತಾಲೂಕಿನ ಪ್ರವಾಹ ಸಂತ್ರಸ್ತರ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು. ಗ್ರಾಮಗಳ ಸ್ಥಳಾಂತರಕ್ಕೆ ಜಮೀನಿನ ಕೊರತೆ ಇದೆ. ಅದಕ್ಕಾಗಿ ಪುನರ್ವಸತಿ ಕಾರ್ಯ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ವಿಶೇಷ ಪ್ರಕರಣದಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
Laxmi News 24×7