ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಘೋಷಿಸಲಾಗಿದೆ. ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆ ನಂತರ ಅನಗತ್ಯವಾಗಿ ರಸ್ತೆಗಿಳಿಯುವ ಸಾರ್ವಜನಿಕರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮತ್ತು ಪೊಲೀಸ್ ಇಲಾಖೆ ತಿಳಿಸಿದೆ.
ಪೊಲೀಸರು, ಮಾರ್ಷಲ್ಸ್ ನೇತೃತ್ವದಲ್ಲಿ ಇಂದಿನಿಂದ ಕಾರ್ಯಾಚರಣೆ ಆರಂಭವಾಗುತ್ತಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಅಗತ್ಯ ವಸ್ತುಗಳ ಸರಬರಾಜು, ಮತ್ತು ವೈದ್ಯಕೀಯ ಸೇವೆಗಳು ಹೊರತುಪಡಿಸಿ ಇನ್ನುಳಿದ ಎಲ್ಲಾ ವ್ಯಾಪಾರ ಹಾಗೂ ವಹಿವಾಟುಗಳ ನಿರ್ಬಂಧವನ್ನ ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸಜ್ಜುಗೊಂಡಿದೆ.
ಯಾವುದಕ್ಕೆಲ್ಲಾ ವಿನಾಯಿತಿ?
* ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು
* ರೋಗಿಗಳನ್ನ ಆಸ್ಪತ್ರೆಗೆ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
* ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು (ಕಡ್ಡಾಯವಾಗಿ ಪಾಸ್ ಹೊಂದಿರಬೇಕು)
* ಐಡಿಕಾರ್ಡ್ ಗಳನ್ನ ಹೊಂದಿರುವ ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸ್ ವರ್ಕರ್ಸ್
* ತುರ್ತು ವೈದ್ಯಕೀಯ ಹಾಗೂ ಅಗತ್ಯ ಸರಬರಾಜು ವಾಹನಗಳಿಗೆ ಅವಕಾಶ
* ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
* ವಿಮಾನ, ರೈಲ್ವೆ ಪ್ರಯಾಣಕ್ಕೆ ಸಂಬಂಧಿತ ಓಡಾಟಕ್ಕೆ ಸೂಕ್ತ ಮಾಹಿತಿ ಒದಗಿಸಬೇಕು
Laxmi News 24×7