Breaking News

ಆಟೋ ಗ್ಯಾಸ್ ದರ ಹೆಚ್ಚಳ; ಆಟೋ ಮೀಟರ್ ಮಿನಿಮಮ್ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ

Spread the love

ಬೆಂಗಳೂರು: ಆಟೋ ಗ್ಯಾಸ್ ದರ ಏರಿಸಿರುವ ಸರ್ಕಾರದ ನಡೆಗೆ ಆಟೋ ಚಾಲಕರು ಮತ್ತು ಮಾಲೀಕರ ಅಸೋಸಿಯೇಷನ್‌ಗಳು ಖಂಡನೆ ವ್ಯಕ್ತಪಡಿಸಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು ಹೆಚ್ಚಿಸಲು ಆಗ್ರಹಿಸಿವೆ. ಆಟೋ ಗ್ಯಾಸ್ ದರ (Auto Gas Rate) ಏರಿಕೆ ಮಾಡಿರುವುದು ಹೊರೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ, ಆಟೋ ಮೀಟರ್ ಮಿನಿಮಮ್ ದರ ಏರಿಸಬೇಕು ಎಂದು ಸಹ ಅಸೋಸಿಯೇಶನ್ ಆಗ್ರಹಿಸಿದೆ. ಆಟೋ ಮೀಟರ್ ಕನಿಷ್ಠ ದರವನ್ನು 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡುವಂತೆ ಆಟೋ ಚಾಲಕರ ಅಸೋಸಿಯೇಷನ್​ಗಳು ಮನವಿ ಮಾಡಿವೆ.

ಜತೆಗೆ ಮಿನಿಮಮ್ ದರವನ್ನು ಪ್ರತಿ ಕಿ.ಮೀ.ಗೆ ₹ 16 ರಂತೆ ನಿಗದಿಪಡಿಸಬೇಕು ಎಂದು ಸಹ ಆಟೋ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಪ್ರತಿ ಲೀಟರ್ ಗ್ಯಾಸ್ ದರ ₹ 56 ಕ್ಕೆ ಮಾರಾಟವಾಗುತ್ತಿದ್ದು, ಆಟೋ ಗ್ಯಾಸ್ ದರ ಒಂದೇ ದಿನದಲ್ಲಿ ₹ 5.50 ಏರಿಕೆ ಕಂಡಿದೆ. ಹೀಗಾಗಿ ಆಟೋ ಪ್ರಯಾಣದ ಕನಿಷ್ಠ ದರವನ್ನು (Auto Meter Minimum Rate) ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ (Karnataka Government) ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಮನವಿ ಮಾಡಿದ್ದಾರೆ.

ಆಟೋ ಗ್ಯಾಸ್ ದರ ಏರಿಕೆಯಾಗಿರುವುದು ಆಟೋ ಚಾಲಕರ ಮತ್ತು ಮಾಲೀಕರ ಅಸೋಸಿಯೇಷನ್ ಗಳು ಸರ್ಕಾರದ ಮೇಲೆ ಅಸಮಾಧಾನಗೊಳ್ಳಲು ಕಾರಣವಾಗಿದೆ. ಕಳೆದ ಒಂಬತ್ತು ವರ್ಷಗಳ ಹಿಂದೆ ಆಟೋ ಕನಿಷ್ಠ ಮೀಟರ್ ದರ ಏರಿಕೆಯಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಆಟೋ ಮಿನಿಮಮ್ ದರ ಏರಿಕೆ ಮಾಡುವ ಅವಕಾಶವಿದೆ. ಆದರೆ ಸಾರಿಗೆ ಇಲಾಖೆ ಏರಿಕೆಗೆ ಅವಕಾಶ ನೀಡಿಲ್ಲ. ಆಟೋ ಎಲ್ ಪಿಜಿ ದರ ಏರಿಕೆ ಆದ ಹಿನ್ನೆಲೆಯಲ್ಲಿ ಆಟೋ ಮಿನಿಮಲ್ ದರವನ್ನು 30 ರೂಪಾಯಿಗೆ ಏರಿಕೆ ಮಾಡಲು ಅವಕಾಶ ನೀಡುವಂತೆ ಈಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಮನವಿಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ