Breaking News

ಬೊಮ್ಮಾಯಿ ಸಚಿವ ಸಂಪುಟ; ಡಿಸಿಎಂ ಇಲ್ಲ, ವಿಜಯೇಂದ್ರ ಹೆಸರೂ ಇಲ್ಲ

Spread the love

ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪಟ್ಟು ಹಿಡಿದಿದ್ದರು. ಆದರೆ, ಉಪಮುಖ್ಯಮಂತ್ರಿ ಸ್ಥಾನ ಈ ಸಂಪುಟದಲ್ಲಿ ಇರುವುದಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾಗೇ ಈಗಿನ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರೂ ಇಲ್ಲ ಎಂದು ಹೇಳಿದ್ದಾರೆ.

 

Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ