Home / ರಾಜಕೀಯ / ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ

ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ

Spread the love

ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ ನೀಡಿ ಇತರೆ ಸಮುದಾಯಗಳ ಉದ್ದೇಶ ಪೂರ್ವಕವಾಗಿ ವಂಚಿಸಲಾಗಿದೆ. ಜೊತೆಗೆ 8 ಜನ ಸಚಿವರು ಮಾತ್ರ ಲಿಂಗಾಯತ ಸಮುದಾಯ ಎಂದು ಸುಳ್ಳು ಹೇಳಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಹಿಂದೆ ಕಾಂಗ್ರೆಸ್ ಪಕ್ಷದ ಶ್ರೀ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗ ಆ ಸಮುದಾಯದ ಇತರೆ ಯಾರಿಗೂ ಮಂತ್ರಿ ಸ್ಥಾನ ನೀಡದೆ ನೈತಿಕತೆ ಮತ್ತು ಮೌಲ್ಯಗಳನ್ನು ಪ್ರತಿ ಪಾದನೆ ಮಾಡಿದ್ದರು. ಆದರೆ ಶ್ರೀ ಬಸವರಾಜ ಬೊಮ್ಮಾಯಿ ಅವರು ತಮ್ಮನ್ನೂ ಸೇರಿದಂತೆ 10 ಮಂದಿಗೆ ಅವರ ಸಮುದಾಯಕ್ಕೆ ಅವಕಾಶ ನೀಡಿ ರಾಜ್ಯದ ಇತಿಹಾಸಕ್ಕೆ ಸಾಮಾಜಿಕ ನ್ಯಾಯಕ್ಕೆ ಮೋಸ ಎಸಗಿದೆ ಎಂದಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದ ಅಲ್ಪಸಂಖ್ಯಾತ, ಅತಿ ಸಣ್ಣ ಸಮುದಾಯ, ಶೋಷಿತ ಸಮುದಾಯ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂಚಿನ ಮೂಲಕ ಮೋಸ ಮಾಡಿದ್ದಾರೆ. ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ರಾಜ್ಯದ ಇತಿಹಾಸದಲ್ಲೇ ಇಷ್ಟು ಪ್ರಮಾಣದಲ್ಲಿ ಒಂದೇ ಸಮುದಾಯಕ್ಕೆ ಯಾವಾಗಲೂ ಅವಕಾಶ ನೀಡಿರಲಿಲ್ಲ. ಬಿಜೆಪಿ ಸಚಿವ ಸಂಪುಟ ವಿಸ್ತರಣೆ ಯಲ್ಲಿ ಸಾಮಾಜಿಕ ನ್ಯಾಯ ಕೈ ಬಿಟ್ಟಿದ್ದು, ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ