Breaking News

ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್: ಇ -ಕೆವೈಸಿಗೆ ಸರ್ವರ್ ಪ್ರಾಬ್ಲಂ, ದಿನಗಟ್ಟಲೆ ಕಾದರೂ ತಪ್ಪದ ಅಲೆದಾಟ

Spread the love

ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಬೇಕೆಂದು ಆದೇಶಿಸಲಾಗಿದೆ. ಆದರೆ, ಅನೇಕ ಕಡೆಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಪರದಾಡುವಂತಾಗಿದೆ.

ದಿನಗಟ್ಟಲೆ ಕಾದರೂ ನೋಂದಣಿ ಕಷ್ಟಸಾಧ್ಯವಾಗಿದೆ. ಇ-ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ ಬಯೋಮೆಟ್ರಿಕ್ ಅಪ್ಡೇಟ್ ಮಾಡುವುದು ಕಷ್ಟ ಸಾಧ್ಯವಾಗಿ ಪರಿಣಮಿಸಿದೆ ಎಂಬ ದೂರುಗಳು ಕೇಳಿಬಂದಿವೆ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಅನ್ವಯ ಪಡಿತರ ಚೀಟಿ ದೃಢೀಕರಣಕ್ಕಾಗಿ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ನ್ಯಾಯಬೆಲೆ ಅಂಗಡಿಗಳ ಎದುರು ದಿನಗಟ್ಟಲೆ ಕಾದರೂ ಸರ್ವರ್ ಸಮಸ್ಯೆಯಿಂದ ಇ -ಕೆವೈಸಿ ಅಪ್ಡೇಟ್ ಮಾಡಲು ಅನೇಕ ಕಡೆಗಳಲ್ಲಿ ಸಾಧ್ಯವಾಗುತ್ತಿಲ್ಲ.

ದಿನದ ದುಡಿಮೆಯನ್ನು ಬಿಟ್ಟು ಕೂಲಿಕಾರ್ಮಿಕರು, ಬಡವರು ನ್ಯಾಯಬೆಲೆ ಅಂಗಡಿಗಳ ಎದುರು ಇ-ಕೆವೈಸಿ ಮಾಡಿಸಲು ನಿಲ್ಲುವಂತಾಗಿದೆ. ಆಗಸ್ಟ್ 10 ರೊಳಗೆ ಪಡಿತರ ಚೀಟಿ ಇರುವ ಕುಟುಂಬದ ಎಲ್ಲ ಸದಸ್ಯರು ಬಯೋಮೆಟ್ರಿಕ್ ದೃಢೀಕರಣ ನೀಡಬೇಕಾಗಿರುವುದರಿಂದ ರೈತರು, ಮಹಿಳೆಯರು ಸೇರಿದಂತೆ ಎಲ್ಲರೂ ನ್ಯಾಯಬೆಲೆ ಅಂಗಡಿಗಳ ಬಳಿ ದಿನಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಲಾಗಿದೆ. ಸರ್ವರ್, ನೆಟ್ ವರ್ಕ್ ಸಮಸ್ಯೆ ಸರಿಪಡಿಸಿ ಇ -ಕೆವೈಸಿ ಮಾಡಿಸಲು ಸಮಯ ವಿಸ್ತರಿಸಬೇಕೆಂದು ಹೇಳಲಾಗಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ