Breaking News

ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಮಾಹಿತಿ, ಪ್ರಮುಖ ಖಾತೆಗೆ ಹೆಚ್ಚಿದ ಪೈಪೋಟಿ

Spread the love

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಶುಕ್ರವಾರವೇ ನೂತನ ಸಚಿವರಿಗೆ ಬಹುತೇಕ ಖಾತೆ ಹಂಚಿಕೆ ಆಗಲಿದೆ. ಪ್ರಮುಖ ಖಾತೆಗಾಗಿ ಒತ್ತಡವಿದ್ದು, ಹೆಚ್ಚುವರಿ ಹೊಣೆಗಾರಿಕೆ ಮೇಲೆಯೂ ನೂತನ ಸಚಿವರು ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿ, ಕೊಠಡಿಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಬಿಎಸ್ವೈ ಸಂಪುಟದಲ್ಲಿದ್ದ ಸಚಿವರೇ ಬಹುತೇಕ ಮುಂದುವರೆದಿದ್ದಾರೆ. ಈ ಮೊದಲು ನಿರ್ವಹಿಸುತ್ತಿದ್ದ ಖಾತೆಗಳನ್ನೇ ಅವರಿಗೆ ನೀಡಲಾಗುತ್ತದೆ. ಎಂದು ಹೇಳಲಾಗಿದೆ. ಆರು ಮಂದಿ ಹೊಸಬರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಇಂಧನ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಕಂದಾಯ, ಲೋಕೋಪಯೋಗಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಸಮಾಜಕಲ್ಯಾಣ ಖಾತೆಗಳಿಗೆ ಹೆಚ್ಚಿನ ಬೇಡಿಕೆಯಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ