Breaking News

ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

Spread the love

ನವದೆಹಲಿ: ದೇಶದಲ್ಲಿ ಕ್ರೀಡಾ ಪಟುಗಳಿಗೆ ನೀಡುವ ಅತ್ಯುನ್ನತ ಪುರಸ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆಯಾಗಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಯೆಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ದೇಶದಾದ್ಯಂತ ಹಲವು ಜನ ನನಗೆ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ನೀಡಿ ಎಂದು ಮನವಿ ಸಲ್ಲಿಸಿದ್ದರು. ಅವರ ಅಭಿಪ್ರಾಯವನ್ನು ಗೌರವಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಭಾರತಕ್ಕೆ ಹಾಕಿ ಕ್ರೀಡೆಯ ಮೂಲಕ ಗೌರವ ತಂದುಕೊಟ್ಟ ಮೇಜರ್ ಧ್ಯಾನ್ ಚಂದ್ ಕ್ರೀಡಾ ಕ್ಷೇತ್ರದ ದಂತಕಥೆ, ಭಾರತದ ಹೆಮ್ಮೆಯ ಕ್ರೀಡಾಪಟು ಅವರು. ನಮ್ಮ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯನ್ನು ಅವರ ಹೆಸರಿನಲ್ಲಿ ನೀಡುವುದು ನಿಜಕ್ಕೂ ಗೌರವ, ಹೆಮ್ಮೆಯ ವಿಷಯ ಎಂದು ಪ್ರಧಾನಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

1991-92 ರಲ್ಲಿ ಈ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲು ಆರಂಭಿಸಿದ್ದು, ಕ್ರೀಡಾ ಸಾಧಕರಿಗೆ 25 ಲಕ್ಷ ರೂ. ನಗದು ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ