Breaking News
Home / ರಾಜಕೀಯ / ಕರ್ನಾಟಕ-ಮಹಾರಾಷ್ಟ್ರ ಜಲ ವಿವಾದ: ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಪವಾರ್-ಬೊಮ್ಮಾಯಿ ಚರ್ಚೆ

ಕರ್ನಾಟಕ-ಮಹಾರಾಷ್ಟ್ರ ಜಲ ವಿವಾದ: ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಪವಾರ್-ಬೊಮ್ಮಾಯಿ ಚರ್ಚೆ

Spread the love

ಬೆಂಗಳೂರು, ಆ. 6: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಿರಿಯ ರಾಜಕೀಯ ಮುತ್ಸದ್ದಿ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಭಯ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. `ಕರ್ನಾಟಕ ರಾಜ್ಯ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಇಬ್ಬರು ಮುಖಂಡರು ಸಮಾಲೋಚನೆ ನಡೆಸಿದ್ದು, ಇದೊಂದು ಸೌಹಾರ್ದಯುತ ಭೇಟಿಯಷ್ಟೇ’ ಎಂದು ಸ್ಪಷ್ಟಪಡಿಸಲಾಗಿದೆ.

ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ. ಉಭಯ ರಾಜ್ಯಗಳ ಜಲ ವಿವಾದಗಳನ್ನು ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಸಂಬಂಧ ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ದಿಲ್ಲಿಯಲ್ಲಿ ಶೀಘ್ರದಲ್ಲೆ ಸಭೆ: ಕರ್ನಾಟಕ ಹಾಗೂ ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವಿನ ಮಹದಾಯಿ, ಕಳಸ-ಬಂಡೂರಿ ಸೇರಿದಂತೆ ಅಂತರ ರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದ್ದು, ಈ ಕುರಿತಂತೆ ಹೊಸದಿಲ್ಲಿಯಲ್ಲಿ ಶೀಘ್ರದಲ್ಲೆ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ