Breaking News

ಲಾರಿ ಚಾಲಕನ ಅಜಾಗರೂಕತೆ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ

Spread the love

ಅಂಕೋಲಾ : ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ರಾ.ಹೆ. 63 ಹೆಬ್ಬುಳ ಬಳಿ ಶುಕ್ರವಾರ ನಡೆದಿದೆ.

ಗದಗ ಜಿಲ್ಲೆಯ ಪಂಚಾಕ್ಷರಿನಗರದ ವಸಂತ ದಾಕಪ್ಪ ಅಕ್ಕಿ(73) ಮೃತ ದುರ್ದೈವಿ, ಕಾರಿನಲ್ಲಿದ್ದ ಉಳಿದ ಮೂವರಿಗೆ ಗಂಭಿರ ಗಾಯಗಳಾಗಿದ್ದು ಅವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾರಿ ಅಂಕೋಲಾದಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ವೇಳೆ ಇನ್ನೊಂದು ವಾಹನವನ್ನು ಹಿಂದಿಕ್ಕುವ ಬರದಲ್ಲಿ ಎದುರಿನಿಂದ ಗದಗದಿಂದ ಕಾರವಾರಕ್ಕೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ