ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದ್ದು 10ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಟಿವಿ9 ಕನ್ನಡ ಡಿಜಿಟಲ್ ಶುಭಕೋರುತ್ತದೆ.
