ನವದೆಹಲಿ: ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವ ಪರಿಗಣನೆಯಲ್ಲಿದೆ ಎಂದು ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್‌ಮೇಘ್ವಾಲ್ ಲೋಕಸಭೆಗೆ ತಿಳಿಸಿದರು.
ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿಯವರ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಕುರಿತು ಚರ್ಚಿಸಲು 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
‘ಇಲ್ಲಿಯವರೆಗೆ ತಮಿಳು, ತೆಲುಗು, ಸಂಸ್ಕೃತ, ಕನ್ನಡ, ಮಲಯಾಳ ಮತ್ತು ಒಡಿಯಾ ಭಾಷೆಗಳಿಗೆ ಶಾಸ್ತ್ರೀಯ ಭಾಷೆಗಳ ಸ್ಥಾನಮಾನ ನೀಡಲಾಗಿದೆ. ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವುದು ಪರಿಗಣನೆಯ ಹಂತದಲ್ಲಿದೆ. ಈ ಬಗ್ಗೆ ಸರ್ಕಾರವು ಸಕಾರಾತ್ಮಕ ಮನೋಭಾವ ಹೊಂದಿದೆ’ ಎಂದು ಉತ್ತರಿಸಿದರು.