Breaking News

ಇಡಿ ದಾಳಿ: ನಂಗೆ ಎಚ್‌ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ

Spread the love

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.​ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್​ ಶುರುವಾಗಿದೆ ಎಂದು ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.

ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವರು ಯಾರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ