ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅವರು ನೂತನವಾಗಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ನೆರೆ ಹಾನಿ ವೀಕ್ಷಣೆ ಮಾಡಿ ಪರಿಹಾರ ಘೋಷಣೆ ಮಾಡುತ್ತಾರೆ ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಹೇಳಿದರು.
ಇಂದಿರಾ ಗಾಂಧಿಜೀಯವರ ರಕ್ತ ಈ ದೇಶದ ಭೂಮಿಯಲ್ಲಿ ಉಳಿದು ಹೋಗಿದೆ. ಅವರ ಹೆಸರನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಇಂದಿರಾ ಗಾಂಧಿ ಅವರು ದೇಶದಲ್ಲಿ ಮೊಟ್ಟ ಮೊದಲು ಗರೀಬಿ ಹಟಾವೋ ಯೋಜನೆ ಜಾರಿಗೆ ತಂದಿದ್ದರು. ಬಿಜೆಪಿಯವರು ಇಂಥ ಹೆಸರಿಗೆ ಅನ್ನಪೂರ್ಣೇಶ್ವರಿ ಹೆಸರು ಇಡುವುದಾಗಿ ಹೇಳುತ್ತಿರುವುದು ದುರ್ದೈವದ ಸಂಗತಿ. ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಹೆಸರು ಬದಲಾವಣೆ ಮಾಡವ ಹೇಳಿಕೆ ಕೊಡಿತ್ತಿರುವುದು ಎಷ್ಟು ಸರಿ ಎಂದು ಹರಿಹಾಯ್ದರು
Laxmi News 24×7