ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಆದೇಶಿಸಲಾಗಿದೆ.
Laxmi News 24×7