Breaking News

Covid-19 Karnataka Update: ರಾಜ್ಯದಲ್ಲಿ 1,186 ಹೊಸ ಪ್ರಕರಣಗಳು

Spread the love

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ 1,186 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 1,776 ಮಂದಿ ಚೇತರಿಸಿಕೊಂಡಿದ್ದು, 24 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಈವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.19 ಲಕ್ಷ ದಾಟಿದೆ. ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 2.02 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 36,817ಕ್ಕೆ ಏರಿದೆ.

ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 28.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 23,316ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 296 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 273 ಪ್ರಕರಣಗಳು, ಕೊಡಗಿನಲ್ಲಿ 83, ಮೈಸೂರಿನಲ್ಲಿ 82, ಉಡುಪಿಯಲ್ಲಿ 80 ಹೊಸ ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ