Breaking News

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್

Spread the love

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಾಜಪೇಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದು ಬಿಜೆಪಿ ಸರ್ಕಾರ ಯಾವುದೇ ಸರ್ಕಾರ ಬಂದರೂ ವ್ಯಕ್ತಿಯ ಹೆಸರಿಡುವ ಪದ್ಧತಿಯನ್ನು ಬಿಟ್ಟು ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯೋಜನೆ ಅಂತ ಹೆಸರಿಟ್ಟರೆ ಯಾವುದೇ ಸರ್ಕಾರ ಸಿಎಂ ಬಂದರೂ ಅದು ಮುಂದುವರೆಯುತ್ತದೆ ಎಂದರು.

ಹಿಂದುಗಳಿಗೆ ಶ್ರಾವಣ ಶನಿವಾರ ಮಹತ್ವದ ದಿನ. ಸಾಲು ಸಾಲು ಹಬ್ಬಗಳು ಬರುತ್ತಿವೆ. ಅಮೆರಿಕಾದಲ್ಲಿ ಕೊವಿಡ್ 3 ನೇ ಅಲೆಯಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನೇಕ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿದ್ದೇನೆ. ಐದಾರು ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೋಡುತ್ತೇನೆ. ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿದೆ. ಅದು ರಾಜ್ಯದಲ್ಲಿ ಕಾಣಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿಎಂ ನಾಳೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ಬೆಡ್ ಗಳನ್ನು ವಾಪಸ್ ನೀಡಲಾಗಿದೆ. ಅಗತ್ಯ ಬಿದ್ದರೆ ಬೆಡ್ ಗಳನ್ನು ವಾಪಸ್ ಪಡೆಯುತ್ತೇವೆ. ನಮ್ಮ ಆದೇಶದಲ್ಲಿಯೇ ಅದನ್ನು ತಿಳಿಸಿದ್ದೇವೆ ಎಂದು ಅಶೋಕ್ ಹೇಳಿದರು.

ಸಚಿವರುಗಳು ಕೂಡ ಕೋವಿಡ್ ನಿಯಮ ಪಾಲಿಸಬೇಕು. ಕೋವಿಡ್ ಎಲ್ಲರಿಗೂ ಒಂದೇ. ಯಾರೂ ನಿಯಮ ಮೀರಬಾರದು ಎಂದ ಅವರು ಸ್ವಾಂತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮದಂತೆ ಆಚರಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ