Breaking News

ಕತ್ತಿಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

Spread the love

ಬೆಂಗಳೂರು: ಮನೆ ಬಳಿ ನಿಂತಿದ್ದ ವೃದ್ಧೆಯ ಮಾಂಗಲ್ಯ ಸರ ಎಗರಿಸಿದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಸಾಸುವೆಘಟ್ಟದ ಬಳಿ ನಡೆದಿದೆ. 2 ಲಕ್ಷ ರೂಪಾಯಿ ಬೆಲೆಬಾಳುವ ಗಂಗಮ್ಮ(60) ನವರ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಡಿಯೋ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿ ಬಳಿ ನಡೆದಿದೆ. ಅಟ್ಟುವನಹಳ್ಳಿಯಲ್ಲಿ 30 ರಿಂದ 35 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮಹದೇವು ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಮೇಕೆ ಹಾಗೂ ಟಗರು ಕಳವು
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದ ಮಾದೇಗೌಡ ಎಂಬುವವರಿಗೆ ಸೇರಿದ ಮೇಕೆ ಮತ್ತು ಟಗರುಗಳನ್ನು ಖದೀಮರು ಹೊತ್ತೊಯ್ದಿದ್ದಾರೆ. ತಮ್ಮ ಜಮೀನಿನಲ್ಲಿ ಮೇಕೆ ಫಾರಂ ಮಾಡಿದ್ದ ಮಾದೇಗೌಡರು, 8 ಟಗರು, 2 ಮೇಕೆ ಸಾಕಿದ್ದರು. ತಡ ರಾತ್ರಿ ಎಲ್ಲಾ ಟಗರು ಮತ್ತು ಮೇಕೆಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಫಾರಂನಲ್ಲಿ ಇದ್ದ ಸಿಸಿ ಕ್ಯಾಮರಾಗಳನ್ನು ಕೂಡ ನಾಶಪಡಿಸಿದ್ದಾರೆ. ಸದ್ಯ ಮಾದೇಗೌಡರು ತಮ್ಮ ಮೇಕೆಗಳನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ