Breaking News
Home / Uncategorized / ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews

ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews

Spread the love

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು.

 

ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ ಎಸ್​​ ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ವಿಧಾನಸೌಧದಲ್ಲಿ ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಶಬ್ದ ಬಳಸಿ ಮಾತನಾಡಿದ ಸಚಿವ ಈಶ್ವರಪ್ಪ ಕಟುವಾದ ಅವಾಚ್ಯ ಬೈಗುಳ ಪದ ಪ್ರಯೋಗ ಮಾಡಿದ್ದರು. ಇದಕ್ಕೆ ಕಾಂಗ್ರೆಸ್​ ನಾಯಕರು ತಕ್ಷಣ ಪ್ರತಿಕ್ರಿಯಿಸಿದ್ದು, ತಿರುಗೇಟು ನೀಡಿದ್ದರು.

 

 

ಆದಷ್ಟು ಬೇಗ ಈಶ್ವರಪ್ಪರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು ಎಂದು ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದರು.

ಶೌಚಾಲಯಕ್ಕೆ ಮೋದಿ ಹೆಸರಿಡಬೇಕೆನ್ನುವುದು ಒಪ್ಪಬೇಕಾ? ಕಾಂಗ್ರೆಸ್ನವರ ಆ ಹೇಳಿಕೆಯನ್ನು ನಾವು ಒಪ್ಪಬೇಕಾ? ಅದಕ್ಕೆ ನಾನು ತಕ್ಷಣ ಆ ರೀತಿ ಹೇಳಕೆಯನ್ನು ನೀಡಿದೆ ಎಂದು ಅವರು ಹೇಳಿದರು. ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಂತೋಷ ಸಂತೋಷ ಎಂದರು. ಹಿಂದೆ ಭಾರತೀಯ ಜನಸಂಘ ಅಧ್ಯಕ್ಷ ದೀನದಯಾಳ ಉಪಾಧ್ಯ ಕಗ್ಗೊಲೆ ಆಯಿತು. ಆಗ ನಮ್ಮ ಹತ್ತಿರ ಶಕ್ತಿ ಇರಲಿಲ್ಲ. ಆಗ ಇಡೀ ರಾಷ್ಟ್ರೀಯ ನಾಯಕರು ಶಾಂತಿಯಿಂದ ಇರೀ ಎಂದರು. ಕೇರಳದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಅದೇ ರೀತಿ ದಾಳಿ ಮುಂದುವರಿಯಿತು. ಆಗ ನಮ್ಮ ಹಿರಿಯರು ಯಾವುದೇ ಕಾರಣಕ್ಕೂ ಸುಮ್ಮನಿರಬೇಡಿ ಎಂದರು. ನೀವಾಗೆ ನೀವು ಯಾರನ್ನೂ ಹೊಡಿಬೇಡಿ, ನಿಮ್ಮ ಹೊಡೆದವರನ್ನು ಬಿಡಬೇಡಿ ಫೇಸ್ ವಿತ್ ಸೇಮ್ ಸ್ಟಿಕ್ ಅಂತಾ ಹೇಳಿದರು. ಇದನ್ನು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಾನು ಹೇಳಿದ್ದು. ಹರಿಪ್ರಸಾದ್ ನಾಗಪುರ ಯೂನಿವರ್ಸಿಟಿ ಹೇಳಿಕೊಟ್ಟಿದ್ದು ಅಂತಾ ಅವರದೇ ಪದ ಬಳಸಿದರು. ಸುಲಭ ಶೌಚಾಲಯಗಳಿಗೆ ನರೇಂದ್ರ ಮೋದಿ ಹೆಸರಿಡಬೇಕು ಎಂದು ಹರಿಪ್ರಸಾದ್ರಂತಹ ವ್ಯಕ್ತಿ ಹೇಳಿದಮೇಲೆ ನನಗೂ ಸಿಟ್ಟು ಬಂತು. ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪೇ. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ವಿತ್ ಡ್ರಾ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಹೋಗಿ ಸರ್ವೇ ಮಾಡಿಕೊಂಡು‌ ಬಂದಿದ್ದಾರೆ
ನೆರೆ ಪೀಡಿತ ಬೆಳಗಾವಿ ಜಿಲ್ಲೆಗೆ ಇನ್ನೂ ಹಣ ಬಿಡುಗಡೆ ಮಾಡದ ವಿಚಾರವಾಗಿಯೂ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ‘ನಿನ್ನೆಯೇ ದೇವರೇ ಶಿವನೇ ಅಂತಾ ಗವರ್ನಮೆಂಟ್ ಬಂದಿದೆ. ಸರ್ಕಾರ ಬರ್ತಿದ್ದ ಹಾಗೇ ನೆರೆಹಾನಿ ಬಗ್ಗೆ ಇನ್ನೂ ವರದಿ ಬಂದಿಲ್ಲ. ವರದಿ ಬಂದ ಮೇಲೆ ಎಷ್ಟು ನಷ್ಟ ಆಗಿದೆ ನೋಡುತ್ತೇವೆ. ವರದಿ ಬಂದ ಮೇಲೆ ಖಂಡಿತ ಹಣ ಬಿಡುಗಡೆ ಮಾಡ್ತೇವೆ. ಇಡೀ ಕರ್ನಾಟಕದಲ್ಲಿ ನೆರೆಯಿಂದ ಹಾನಿಯಾದ ಬಗ್ಗೆ ಸರ್ವೇ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರು ವರದಿ ಕಳಿಸುತ್ತಿದ್ದಾರೆ. ಕಳೆದ ಬಾರಿ ಪ್ರವಾಹ ವೇಳೆ 1800 ಕೋಟಿ ರೂಪಾಯಿ ರಸ್ತೆ ದುರಸ್ತಿಗಾಗಿ ಬಿಡುಗಡೆ ಮಾಡಿದ್ವಿ. ಎಲ್ಲಾ ಜಿಲ್ಲೆಗಳಿಗೆ ಎಷ್ಟೆಷ್ಟು ಹಣ ಬಿಡುಗಡೆ ಮಾಡಬೇಕೆಂಬ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಹೋಗಿ ಸರ್ವೇ ಮಾಡಿಕೊಂಡು‌ ಬಂದಿದ್ದಾರೆ. ಉಸ್ತುವಾರಿ ಸಚಿವರು ವರದಿ ನೀಡುತ್ತಿದ್ದಂತೆ ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

Spread the love ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ