Breaking News

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

Spread the love

ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್​ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್​ ಸಿಂಗ್​ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಆನಂದ್​ ಸಿಂಗ್​ ಸಿಎಂ ಭೇಟಿಗೂ ಮೊದಲು ಮಾಜಿ ಸಿಎಂ ಬಿಎಸ್​ವೈರನ್ನ ಭೇಟಿಯಾಗಲಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ